SHARE

ಬೆಳಗಾವಿ, ಸೆ.25(ಕರ್ನಾಟಕ ವಾರ್ತೆ) ಬೆಳಗಾವಿಯ ಸದಾಶಿವ ನಗರ ಬಳಿಯ ಸಂಪಿಗೆ ನಗರದಲ್ಲಿರುವ ರೈಲ್ವೆ ಇಲಾಖೆಯ ರಾಜ್ಯ ಸಚಿವ ಹಾಗೂ ಸಂಸದರಾಗಿದ್ದ ದಿವಂಗತ ಸುರೇಶ್ ಅಂಗಡಿ ಅವರಿಗೆ ಗಣ್ಯರು ಇಂದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.

ಕೈಗಾರಿಕಾ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಜಗದೀಶ್ ಶೆಟ್ಟರ್ ದಂಪತಿ, ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಪೊಲೀಸ್ ಆಯುಕ್ತರಾದ ತ್ಯಾಗರಾಜನ್, ಡಿಸಿಪಿ ವಿಕ್ರಮ್, ಬೆಳಗಾವಿ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಶಶಿಧರ್ ಕುರೇರ್, ಮಹಾನಗರ ಪಾಲಿಕೆಯ ಆಯುಕ್ತರಾದ ಜಗದೀಶ್ ಕೆ.ಎಚ್. ಸೇರಿದಂತೆ ಅನೇಕ ಗಣ್ಯರು ಅಗಲಿದ ನಾಯಕ ಸುರೇಶ್ ಅಂಗಡಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಶ್ರದ್ಧಾಂಜಲಿ ಸಲ್ಲಿಸಿದರು.

ದಿವಂಗತ ಸುರೇಶ್ ಅಂಗಡಿ ಅವರ ಪತ್ನಿ, ಮಕ್ಕಳು ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.