SHARE

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಶುಕ್ರವಾರ ಸಂಜೆ ಬೆಳಗಾವಿಯಲ್ಲಿ ಇತ್ತೀಚೆಗೆ ನಿಧನರಾದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿದರು.

ಸುರೇಶ ಅಂಗಡಿ ಬಹಳ ಸೌಮ್ಯ ಸ್ವಭಾವದವರಾಗಿದ್ದರು. ನನ್ನೊಂದಿಗೆ ಆತ್ಮೀಯ ಸಂಬಂಧ ಹೊಂದಿದ್ದರು. ಅನೇಕ ಬಾರಿ ಅವರನ್ನು ಭೇಟಿಯಾಗಿದ್ದೆ. ಸಚಿವರಾದ ನಂತರವೂ ಹಲವಾರು ಬಾರಿ ಮಾತನಾಡಿದ್ದೆವು. ಅವರ ಆಕಸ್ಮಿಕ ನಿಧನ ನಮಗೂ ಬಹಳ ದುಃಖವನ್ನುಂಟು ಮಾಡಿದೆ ಎಂದು ಶಿವಕುಮಾರ ಹೇಳಿದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಕೆಪಿಸಿಸಿ ವಕ್ತಾರರಾದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಅಂಜಲಿ ನಿಂಬಾಳಕರ್, ಮಹಾಂತೇಶ ಕೌಜಲಗಿ ಮೊದಲಾದವರು ಉಪಸ್ಥಿತರಿದ್ದರು.