ಬೆಳಗಾವಿ: ನಗರದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಹಿನ್ನೆಲೆ ಕೊರೊನಾ ಮುಂಜಾಗ್ರತಾ ಕ್ರಮವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸಂಚರಿಸುವ ರಸ್ತೆ ಮಾರ್ಗದಲ್ಲಿ ಮಹಾನಗರ ಪಾಲಿಕೆ ವತಿಯಿಂದ ಸ್ಯಾನಿಟೈಸರ್ ಮಾಡಲಾಗುತ್ತಿದೆ. ಇಲ್ಲಿನ ಕಾಲೇಜು ರಸ್ತೆಯಲ್ಲಿರುವ ಗಾಂಧಿನಗರದಲ್ಲಿ ಬಿಜೆಪಿ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆ ಹಿನ್ನೆಲೆ ಕುಂದಾನಗರಿಗೆ ಆಗಮಿಸಿರುವ ಮುಖ್ಯಮಂತ್ರಿ ಬಿಎಸ್ವೈ ಸೇರಿದಂತೆ ಗಣ್ಯರು ಯುಕೆ 27 ಹೋಟೆಲ್ ನಲ್ಲಿ ತಂಗಿದ್ದಾರೆ. ಅವರು ತಂಗಿದ್ದ ಹೋಟೆಲ್ ಸುತ್ತಲಿನ ಪ್ರದೇಶ ಹಾಗೂ ನಗರದ ಚೆನ್ನಮ್ಮ ವೃತ್ತ,ಕೊಲ್ಲಾಪುರ ಸರ್ಕಲ್, ಕಾಂಗ್ರೆಸ್ ರೋಡ್, ಕಾಲೇಜು ರಸ್ತೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಸ್ಯಾನಿಟೈಸರ್ ಮಾಡಲಾಗುತ್ತಿದೆ. ಇನ್ನು ಕರ್ನಾಟಕ ಬಂದ್ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಮುಖ್ಯಮಂತ್ರಿ ಸಂಚರಿಸುವ ಮಾರ್ಗದಲ್ಲಿ ಪೊಲೀಸ್ ಬಂದೂಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ.