SHARE

ಬೆಳಗಾವಿ: ಕೋವಿಡ್-19 ಡೆಲ್ಟಾ ಪ್ಲಸ್ ವೈರಾಣು ಹರಡುವಿಕೆಯು ನೆರೆಯ ರಾಜ್ಯವಾದ ಮಹಾರಾಷ್ಟ್ರದಲ್ಲಿ ತೀವ್ರವಾಗಿ ಹರಡುತ್ತಿರುವುದರಿಂದ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಗೋಕಾಕ ಫಾಲ್ಸ್ , ಧೂಪದಾಳ ಹಾಗೂ ಗೊಡಚಿನಮಲ್ಕಿ ಪ್ರವಾಸಿ ತಾಣಗಳಿಗೆ ಶನಿವಾರ ಮತ್ತು ಭಾನುವಾರ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಮಹಾರಾಷ್ಟ ರಾಜ್ಯದಿಂದ ಹಾಗೂ ರಾಜ್ಯದ ಬೇರೆ ಬೇರೆ ಸ್ಥಳಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರ ಹಾಗೂ ಪ್ರವಾಸಿಗರ ಆರೋಗ್ಯದ ಹಿತದೃಷ್ಟಿಯಿಂದ ಕೊವಿಡ್-19 ವೈರಾಣು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವುದು ಅತ್ಯಂತ ಅವಶ್ಯಕವಾಗಿರುತ್ತದೆ.‌ ವೈರಾಣು ಹರಡುವಿಕೆಯನ್ನು ನಿಯಂತ್ರಿಸಲು ಗೋಕಾಕ ತಾಲೂಕಿನ ಪ್ರವಾಸಿ ಸ್ಥಳಗಳಾದ ಗೋಕಾಕ ಫಾಲ್ಸ್ ರೂಪದಾಳ ಹಾಗೂ ಗೊಡಚಿನಮಲ್ಕಿಗಳಿಗೆ ಮಹಾರಾಷ್ಟ್ರ ರಾಜ್ಯದಿಂದ ಹಾಗೂ ರಾಜ್ಯದ ಬೇರೆ ಬೇರೆ ಸ್ಥಳಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಪ್ರವಾಸಿ ತಾಣಗಳಿಗೆ ನಿಷೇಧ ಹೆರಲಾಗಿದೆ.‌ ಆ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವುದರಿಂದ ಮುಂಬರುವ ದಿನಗಳಲ್ಲಿ ಕೋವಿಡ್ -19 ವೈರಾಣುವಿನ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಗಳಿರುವುದರಿಂದ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಮುಂಜಾಗೃತಾ ಕ್ರಮವಾಗಿ ಆ ಸ್ಥಳಗಳಲ್ಲಿ ಸಾರ್ವಜನಿಕ ವೀಕ್ಷಣೆಯನ್ನು ವಾರಾಂತ್ಯದ ದಿನಗಳಾದ ಶನಿವಾರ , ರವಿವಾರ ಹಾಗೂ ಸಾರ್ವಜನಿಕ ರಜಾ ದಿನಗಳಂದು ನಿರ್ಧಂಧಿಸುವಂತೆ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಅವರು ಅದೇಶ ಹೊರಡಿಸಿದ್ದಾರೆ.‌