SHARE

ನವದೆಹಲಿ: ಬೆಳಗಾವಿ ಸಂಸದೆ ಮಂಗಳಾ ಅಂಗಡಿ ಅವರು ವಿಶ್ವಗುರು ಬಸವಣ್ಣನವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿರುವ ಮೂಲಕ ಎಲ್ಲರ ಗಮನ ಸೆಳೆದರು. ದಿ.ಸುರೇಶ ಅಂಗಡಿ ಅವರ ನಿಧನದಿಂದ ತೆರವಾಗಿದ್ದ ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಗೆದ್ದಿದ್ದ ಅವರ ಧರ್ಮಪತ್ನಿ ಮಂಗಳಾ ಅಂಗಡಿ ಅವರು ಇಂದು ಅಧಿಕೃತವಾಗಿ ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಇಂದಿನಿಂದ ಚಳಿಗಾಲ ಅಧಿವೇಶನ ಆರಂಭವಾದ ಹಿನ್ನೆಲೆಯಲ್ಲಿ ಪ್ರಮಾಣವಚನ ಸ್ವೀಕರಿಸಿದ ಮಂಗಳಾ ಅಂಗಡಿ ಬಸವಣ್ಣನ ಹೆಸರಿನಲ್ಲಿ ಪ್ರಪ್ರಮಾಣವಚನ ಸ್ವೀಕರಿಸಿರು. ನಂತರ ಸಂಸದೆ ಮಂಗಲ ಅಂಗಡಿಯವರು ಪ್ರಧಾನಿ ನರೇಂದ್ರ ಮೋದಿ, ಸ್ಪೀಕರ್ ಓಂ ಬಿರ್ಲಾ ಸೇರಿದಂತೆ ಸಂಸತ್ತನ ಎಲ್ಲ ಸದಸ್ಯರಿಗೆ ನಮಸ್ಕರಿಸಿದರು.