SHARE

ಬೆಳಗಾವಿ: ಶನಿವಾರದಂದು ಭಾರತೀಯ ಜನತಾ ಪಾರ್ಟಿ ಬೆಳಗಾವಿ ಮಹಾನಗರ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆ ಮಾಡಲಾಯಿತು. ಈ ಸಭೆಯಲ್ಲಿ ಮುಂದಿನ ದಿನಗಳಲ್ಲಿ ಪಕ್ಷವನ್ನು ಹೇಗೆ ಮತ್ತಷ್ಟು ಬಲ ಪಡಿಸುವುದು ಇದರ ಜೊತೆಗೆ ಅನೇಕ ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಕೊರೊನಾ ಎರಡನೆ ಅಲೆಯಲ್ಲಿ ಕಾರ್ಯ ನಿರ್ವಹಿಸಿದ್ದ ಪೊಲೀಸ್ ಸಿಬ್ಬಂದಿ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ಸನ್ಮಾನ ಮಾಡಲಾಯಿತು. ಭಾರತೀಯ ಜನತಾ ಪಾರ್ಟಿ ಬೆಳಗಾವಿ ಮಹಾನಗರ ಜಿಲ್ಲಾ ಅಧ್ಯಕ್ಷರಾದ ಶ್ರೀ ಶಶಿಕಾಂತ ಆರ್ ಪಾಟೀಲ ಹಾಗೂ ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷರಾದ ಶ್ರೀಮತಿ ಪ್ರೇಮಾ ಭಂಡಾರಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ದಾದಾಗೌಡ ಬಿರಾದಾರ ಮತ್ತು ಮುರುಘೇಂದ್ರಗೌಡಾ ಪಾಟೀಲ ಮತ್ತು ಬೆಳಗಾವಿ ದಕ್ಷಿಣ ಮಂಡಲದ ಅಧ್ಯಕ್ಷರಾದ ಶ್ರೀಮತಿ ಗೀತಾ ಸುತಾರ, ರಾಜ್ಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯರು ಮತ್ತು ಬೆಳಗಾವಿ ಮಹಾನಗರ ಮಹಿಳಾ ಮೋರ್ಚಾ ಪ್ರಭಾರಿ ಶ್ರೀಮತಿ ಭಾಗೀರಥಿ ಪಾಟೀಲ ಹಾಗೂ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಮಹಾನಗರ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಸುವರ್ಣಾ ಪಾಟೀಲ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಗೀತಾ ಕೋಳಿ ಹಾಗೂ ಆರತಿ ಪಾಟೋಳೆ ಹಾಗೂ ಮಹಿಳಾ ಮೋರ್ಚಾ ಪದಾಧಿಕಾರಿಗಳು ಹಾಗೂ ಜಿಲ್ಲಾ ಮಹಿಳಾ ಪದಾಧಿಕಾರಿಗಳು ಭಾಗವಹಿಸಿದ್ದರು.