SHARE

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ.ಬೆಂಗಳೂರಿನ ಕ್ಯಾಪಿಟಲ್ ಹೊಟೆಲ್ ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಪಕ್ಷದ ವೀಕ್ಷಕರ ಉಪಸ್ಥಿತಿಯಲ್ಲಿ ಈ ಘೋಷಣೆಯಾಗಿದೆ. ಬಿ.ಎಸ್.ಯಡಿಯೂರಪ್ಪ ರಾಜಿನಾಮೆಯಿಂದಾಗಿ ತೆರವಾಗಿರುವ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಾಹಿತಿ ಬಂದಿದೆ. ಬಸವರಾಜ ಬೊಮ್ಮಾಯಿ ಯಡಿಯೂರಪ್ಪ ಸಂಪುಟದಲ್ಲಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದರು.