SHARE

ಬೆಳಗಾವಿ:ಕಾಂಗ್ರೆಸ್ ಪಕ್ಷದ ಪ್ರಭಾವಿ ಮುಖಂಡ,ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ಕೊನೆಗೂ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ಧಾರವಾಡ ಜಿಲ್ಲಾ ಪಂಚಾಯತಿ ಅಧ್ಯಕ್ಷ ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪದಲ್ಲಿ ಜೈಲುವಾಸ ಅನುಭವಿಸುತ್ತಿದ್ದ ವಿನಯ ಕುಲಕರ್ಣಿ ಅವರಿಗೆ ಇಂದು ಸುಪ್ರೀಂ ಕೋರ್ಟ್ ಷರತುಬದ್ಧ ಜಾಮೀನು ಮಂಜೂರು ಮಾಡಿದೆ.ಆದರೆ ಧಾರವಾಡಕ್ಕೆ ಹೋಗದಂತೆ ಸೂಚನೆ ನೀಡಿದೆ. ಅಲ್ಲದೆ ಸಿಬಿಐ ಅಧಿಕಾರಿಗಳು ಕರೆದಾಗಲೆಲ್ಲ ವಿಚಾರಣೆಗೆ ಸಹಕರಿಸಬೇಕು ಎಂದು ಸರ್ವೋಚ್ಚ ನ್ಯಾಯಾಲಯ ಷರತುಬದ್ಧ ಜಾಮೀನು ಮಂಜೂರು ಮಾಡಿದೆ.