SHARE

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಅಂಗವಾಗಿ ಏರ್ಪಡಿಸಲಾದ ಲಸಿಕಾ ಮೆಗಾ ಮೇಳವನ್ನು ಯಶಸ್ವಿಗೊಳಿಸಿ : ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಪ್ರಧಾನಿ ನರೇಂದ್ರ ಮೋದಿಯರವ ಹುಟ್ಟು ಹಬ್ಬದಂದು ರಾಜ್ಯ ಆರೋಗ್ಯ ಇಲಾಖೆ ಲಸಿಕೆ ಮೆಗಾ ಮೇಳ ಹಮ್ಮಿಕೊಂಡಿದ್ದು, ಲಸಿಕೆ ಮೆಗಾ ಮೇಳ ಕಾರ್ಯಕ್ರಮದ ಸದುಪಯೋಗವನ್ನು ಅರಭಾoವಿ ಮತಕ್ಷೇತ್ರದ ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಸೆ.17 ಶುಕ್ರವಾರದಂದು ತಾಲೂಕಿನ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಆಯ್ದ ಅಂಗನವಾಡಿ ಕೇಂದ್ರಗಳಲ್ಲಿ ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದ್ದು, 18 ವರ್ಷ ಮೇಲ್ಪಟ್ಟ ಎಲ್ಲ ಸಾರ್ವಜನಿಕರು ನಿಮ್ಮ ಗ್ರಾಮದ ಅಂಗವನವಾಡಿ ಹಾಗೂ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಹತ್ತಿರದ ಲಸಿಕಾ ಕೇಂದ್ರಗಳಲ್ಲಿ ಕೋವಿಡ್ ಲಸಿಕೆಯನ್ನು ಪಡೆಯಬಹುದು ಎಂದು ತಿಳಿಸಿದ್ದಾರೆ.